ಹೌದು ಮಜ್ಜಿಗೆಯು ಆರೋಗ್ಯದ ಹಲವಾರು ಗುಣಗಳನ್ನು ಹೊಂದಿದೆ ಹಾಗು ಅದರ ಸೇವನೆ ಮನುಷ್ಯನಿಗೆ ತುಂಬಾನೇ ಉಪಯುಕ್ತವಾಗಿದೆ. ಮಜ್ಜಿಗೆಯಲ್ಲಿ ಹಲವು ರೋಗನಿವಾರಕ ಗುಣಗಳನ್ನು ಹೊಂದಿದ್ದು ಅದು ಯಾವ ರೀತಿಯಲ್ಲಿ ಕೆಲಸ ಮಾಡುತ್ತದೆ ಎನ್ನುವುದನ್ನು ಈ ಮುಂದೆ ನೋಡಣ. । ಇದನ್ನೂ ಓದಿ : ಬೆಲ್ಲ ತಿನ್ನೋದ್ರಿಂದ ಎಷ್ಟೊಂದು ದೈಹಿಕ ಸಮಸ್ಯೆಗಳಿಂದ ಮುಕ್ತರಾಗಬಹುದು ಗೊತ್ತಾ?

ಮಜ್ಜಿಗೆಯು ನಿಮ್ಮಲಿರುವ ಅನಗತ್ಯ ಕೊಬ್ಬಿನಂಶ ತೆಗೆದುಹಾಕುತ್ತದೆ.ಅದಲ್ಲದೆ ಬೆಳವಣಿಗೆಗೆ ಅಗತ್ಯವಿರುವ ವಿಟಮಿನ್ ಇದರಲ್ಲಿ ಹೇರಳವಾಗಿದೆ. ಮತ್ತು ಮಜ್ಜಿಗೆಯು ಜಠರದ ಒಳಪದರವನ್ನು ಲೇಪಿಸಿ, ಜಠರದ ತೀಕ್ಷ್ಣ ಸ್ರಾವವನ್ನು ನಿಯಂತ್ರಿಸುತ್ತದೆ. ಹುಳಿತೇಗು, ಹೊಟ್ಟೆಹುರಿ, ಎದೆಯುರಿ ನಿವಾರಿಸುತ್ತದೆ.

ನಿಮ್ಮಲ್ಲಿ ಅಜೀರ್ಣ, ಹೊಟ್ಟೆನೋವು ಕಂಡುಬಂದರೆ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ನಿವಾರಣೆಯಾಗುತ್ತದೆ . ಹಾಗು ಮಜ್ಜಿಗೆಯಲ್ಲಿರುವ ಪೊಟಾಶಿಯಂ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಇದರಲ್ಲಿ ಕ್ಯಾಲ್ಶಿಯಂ ಹಾಗೂ ಫಾಸ್ಪರಸ್ ಅಂಶ ಹೆಚ್ಚಾಗಿದ್ದು, ಮೂಳೆಗಳಿಗೆ ಅಗತ್ಯ ಶಕ್ತಿ ನೀಡುತ್ತದೆ.

ಜಠರ ವಿಕಾರಗಳಿಗೆ ಹಾಗು ಬೇಧಿ, ರಕ್ತಬೇಧಿ ಹಾಗೂ ಕರುಳಿನ ವಿಕಾರಗಳಲ್ಲಿ, ಕರುಳಿನಲ್ಲಾಗುವ ವಿಪರೀತ ಒತ್ತಡವನ್ನು ಕಡಿಮೆಯಾಗಿಸಿ ಅಗತ್ಯ ನೀರಿನಾಂಶ ಹಾಗೂ ಖನಿಜಾಂಶವನ್ನು ನೀಡುತ್ತದೆ.ಹಾಗೆಯೆ ಕ್ಷಾರ ಹಾಗೂ ಕಷಾಯ ಗುಣಗಳಿಂದಾಗಿ ಮೂಲವ್ಯಾಧಿಯಲ್ಲಿನ ಗುದಾಂಕುರವನ್ನು ನಿವಾರಿಸುತ್ತದೆ. । ಇದನ್ನೂ ಓದಿ : ಬಿಸಿ ನೀರಿನಲ್ಲಿ ತುಳಿಸಿ ಎಲೆ ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ….? ತಿಳಿಯಲು ಈ ಲೇಖನ ಓದಿ…..!

ಮಜ್ಜಿಗೆಯಲ್ಲಿ ಉಪ್ಪು ಮತ್ತು ಹಸಿಶುಂಠಿ ರಸವನ್ನು ಬೆರೆಸಿ ಕುಡಿಯುವದರಿಂದ ವಾಂತಿ ಕಡಿಮೆಯಾಗುತ್ತದೆ.
ಮಜ್ಜಿಗೆ ಸೇವನೆಯಿಂದ ತೆರೆದ ಗಾಯ, ಬಾಯಿಹುಣ್ಣು, ರಕ್ತಸ್ರಾವದಂಥ ರೋಗಗಳು ಬಹುಬೇಗ ಗುಣವಾಗುತ್ತವೆ.

ನಿಮಗೆ ಅತಿಯಾದ ಊಟ ಮಾಡಿ ಹೊಟ್ಟೆ ಭಾರವೆನಿಸುತ್ತಿದ್ದರೆ ಮಜ್ಜಿಗೆಗೆ ಉಪ್ಪು, ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಸೇರಿಸಿ ಕುಡಿದರೆ ತಿಂದ ಆಹಾರ ಜೀರ್ಣವಾಗುತ್ತದೆ.ಹಾಗು ಬಾರ್ಲಿ ಗಂಜಿಯನ್ನು ಮಜ್ಜಿಗೆ ಮತ್ತು ನಿಂಬೆರಸದೊಂದಿಗೆ ಸೇವಿಸಿದರೆ ರಕ್ತದೊತ್ತಡ ಮತ್ತು ತಲೆನೋವು ಗುಣವಾಗುತ್ತದೆ.

ಆ್ಯಸಿಡಿಟಿ, ಮಲಬದ್ಧತೆ ಹಾಗೂ ಮೂಲವ್ಯಾಧಿ ಇರುವವರು ಅರ್ಧ ಚಮಚ ಶುಂಠಿರಸ ಹಾಗೂ ಜೀರಿಗೆಪುಡಿಯನ್ನು ಮಜ್ಜಿಗೆಯೊಂದಿಗೆ ಕುಡಿದರೆ ನಿವಾರಣೆಯಾಗುತ್ತದೆ. ಚಿಟಿಕೆ ಉಪ್ಪು, ಒಂದು ಚಮಚ ಸಕ್ಕರೆಯೊಂದಿಗೆ ಒಂದು ಗ್ಲಾಸ್ ಮಜ್ಜಿಗೆ ಸೇವನೆ ಬಹಳ ಉತ್ತಮ. ಇದು ಅಗತ್ಯ ನೀರಿನಾಂಶವನ್ನು ನೀಡುತ್ತದೆ ಹಾಗೂ ಅತಿಸಾರವನ್ನು ನಿಯಂತ್ರಿಸುತ್ತದೆ. ತ್ವಚೆಯ ಕಾಂತಿಯನ್ನು ಹೆಚ್ಚಿಸಿ ಮುಪ್ಪನ್ನು ತಡೆಯುತ್ತದೆ.

ಸಕ್ಕರೆ ಕಾಯಿಲೆ ಇರುವವರಿಗೂ ಮಜ್ಜಿಗೆ ನೀರು ಉತ್ತಮ. ದಿನದಲ್ಲಿ ನಾಲ್ಕೈದು ಲೋಟ ಮಜ್ಜಿಗೆ ನೀರು ಕುಡಿಯುತ್ತಿದ್ದರೆ ದೇಹದ ಸ್ಥಿತಿ ಉತ್ತಮವಾಗಿರುತ್ತದೆ.ಮತ್ತು ಜೀರಿಗೆ ಪುಡಿಯನ್ನು ಮಜ್ಜಿಗೆ ಹಾಗೂ ಸ್ವಲ್ಪ ಉಪ್ಪು ಬೆರೆಸಿ ಕುಡಿದರೆ ಜೀರ್ಣಶಕ್ತಿ ಹೆಚ್ಚಿಸುತ್ತದೆ.

ತಲೆಹೊಟ್ಟಿನ ಸಮಸ್ಯೆ ಇರುವವರು ಹುಳಿ ಮಜ್ಜಿಗೆಯನ್ನು ಕೂದಲಿನ ಬುಡಕ್ಕೆ ಸವರಿ ಎರಡು ಗಂಟೆ ಕಳೆದು ಸ್ನಾನ ಮಾಡಬೇಕು. ಹೀಗೆ ನಾಲ್ಕೈದು ಸಲ ಸ್ನಾನ ಮಾಡಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ. ಲಿವರ್‌ನಲ್ಲಿನ ವಿಷಗುಣಗಳನ್ನು ತೆಗೆದುಹಾಕುವ ಶಕ್ತಿ ಮಜ್ಜಿಗೆಗೆ ಇದೆ. । ಇದನ್ನೂ ಓದಿ : ಬೆಳ್ಳುಳ್ಳಿ ನೋಡೋಕೆ ಚಿಕ್ಕದಾದ್ರು ಅದರ ಕೆಲಸ ದೊಡ್ಡೋದು ..!

LEAVE A REPLY

Please enter your comment!
Please enter your name here