ತಲೆ ಕೂದಲು ಉದುರುವ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೆ? ನಿಮ್ಮ ಮನೆಯಲ್ಲಿಯೇ ಇದೆ ಮನೆಮದ್ದು ..!

ಎಲ್ಲ ನ್ಯೂಸ್

ಹೌದು ತಲೆಕೂದಲು ಉದುರುವಿಕೆಯನ್ನು ತಡೆಗಟ್ಟುವ ಈ ಸಿಂಪಲ್ ಮನೆ ಮದ್ದು ಬಳಸಿ ನಿಮ್ಮ ತಲೆಕೂದಲು ಉದರುವಿಕೆಯ ಸಮಸ್ಯೆಯಿಂದ ಮುಕ್ತಿ ಹೊಂದಿ. ಹಾಗಾದರೆ ನೀವು ಈ ಸಿಂಪಲ್ ವಿಧಾನವನ್ನು ಮಾಡಲೇ ಬೇಕು.

ಯಾವಾಗಲೂ ನೈಸರ್ಗಿಕ ಶಾಂಪೂವನ್ನೇ ತಲೆ ತೊಳೆಯಲು ಬಳಸಿ. ಆದರೂ ಬಹಳಷ್ಟು ಶಾಂಪೂಗಳು ರಾಸಾಯನಿಕವನ್ನೇ ಹೊಂದಿರುತ್ತದೆ. ಇದು ನಿಮ್ಮ ಕೂದಲ ಮೇಲೆ ಕೆಟ್ಟ ಪರಿಣಾಮ ಬೀರಲೂ ಬಹುದು. ರಾಸಾಯನಿಕಗಳು ತಲೆಯ ಉಷ್ಣವನ್ನು ಹೆಚ್ಚಿಸುತ್ತದೆ. ಇದರ ಪರಿಣಾಮವೇ ಪಿತ್ತ. ಹಾಗಾಗಿ ಸೀಗೆಕಾಯಿ, ನೆಲ್ಲಿಕಾಯಿ ಪುಡಿಯನ್ನು ತಲೆ ತೊಳೆಯಲು ಬಳಸುವುದು ಉತ್ತಮ.

ಕಪ್ಪು ಎಳ್ಳು ಮತ್ತಿತರ ವಸ್ತುಗಳನ್ನು ಸೇರಿಸಿ ಮನೆಯಲ್ಲೇ ಎಣ್ಣೆ ಮಾಡಿ ನಿತ್ಯ ತಲೆಗೆ ಹಚ್ಚುವುದರಿಂದಲೂ ಕೂದಲು ಉದುರುವುದನ್ನು ಕಡಿಮೆ ಮಾಡಿಕೊಳ್ಳಬಹುದು.

ತಲೆಗೆ ಸ್ನಾನ ಮಾಡಿದ ಮೇಲೆ ತಲೆ ಬುಡವನ್ನು ಚೆನ್ನಾಗಿ ಮಸಾಜ್ ಮಾಡುವಂತೆ ಉಜ್ಜಿ. ಇದು ನಿಮ್ಮ ತಲೆಬುಡದಲ್ಲಿ ರಕ್ತ ಬಸಳೆ ಸೊಪ್ಪಿನ ಹಸಿಯಾದ ಜ್ಯೂಸ್ ಮಾಡಿ ಕುಡಿಯಿರಿ. ಇದು ಕೂದಲ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಕ್ಯಾರೆಟ್ ಜ್ಯೂಸ್ ಕೂಡಾ ಉತ್ತಮ.

ಕಹಿಬೇವು, ಮೆಹೆಂದಿ ಸೊಪ್ಪನ್ನು ಸಾಸಿವ ಎಣ್ಣೆಯಲ್ಲಿ ಕುದಿಸಿ ತಣಿಸಿ. ನಂತರ ಇದನ್ನು ಸೋಸಿ ಬಾಟಲಿಯಲ್ಲಿ ಹಾಕಿಡಿ. ಅದಕ್ಕೆ ಕೆಲವು ಚೂರು ಕರ್ಪೂರವನ್ನೂ ಹಾಕಿಡಿ. ಈ ಎಣ್ಣೆಯನ್ನು ಪ್ರತಿನಿತ್ಯ ತಲೆಗೆ ಬಳಸಬಹುದು. ಮಸಾಜ್‌ಗಾಗಿಯೂ ಬಳಸಬಹುದು.

ಪ್ರತಿದಿನವೂ ತೆಂಗಿನೆಣ್ಣೆ ಹಾಗೂ ನಿಂಬೆಹಣ್ಣಿನ ರಸವನ್ನು ಮಿಕ್ಸ್ ಮಾಡಿ ತಲೆಗೆ ಹಚ್ಚಿ ಸ್ವಲ್ಪ ಹೊತ್ತು ಬಿಟ್ಟು ಸ್ನಾನ ಮಾಡಿದರೆ ಉತ್ತಮ ಫಲ ಕಾಣುತ್ತದೆ.

ಕೊತ್ತಂಬರಿ ಸೊಪ್ಪಿನ ಪೇಸ್ಟ್ ಮಾಡಿ ತಲೆಗೆ ಹಚ್ಚಿದರೆ ಕೂದಲು ಉದುರುವ ಸಮಸ್ಯೆಗೆ ಉತ್ತಮ ಫಲ ಕಾಣುತ್ತದೆ. ಬೋಳಾದ ತಲೆಗೂ ಇದು ಉತ್ತಮ.

Leave a Reply

Your email address will not be published. Required fields are marked *